ಹಾಸನ : ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಸಕಲೇಶಪುರ ತಾಲೂಕಿನ, ಸುಳ್ಳಕ್ಕಿ ಮೇಲಕೆರೆ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ (54) ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿ. ಗದ್ದೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಸೊಂಡಿಲಿನಿಂದ ಎಸೆದು ತುಳಿದು ಕೊಂದಿದೆ.
ಘಟನಾ ಸ್ಥಳಕ್ಕೆ ಅರಣ್ಯ ಸಚಿವರು ಅಗಮಿಸುವಂತೆ ಸ್ಥಳೀಯರು ಹಾಗೂ ಸಂಬಂಧಿಕರು ಆಗ್ರಹಿಸಿದ್ದು, ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸದ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿದ್ದಾರೆ.
ಆರು ತಿಂಗಳ ಅಂತರದಲ್ಲಿ ಐವರು ಕಾಡಾನೆಗಳ ದಾಳಿಗೆ ಬಲಿಯಾಗಿದ್ದಾರೆ.