ಹಾಸನ: ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿ ಪಡೆದ ಡೆಂಗ್ಯೂ

Prasthutha|

ಹಾಸನ: ಡೆಂಗ್ಯೂ ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿಪಡೆದಿದೆ. ಮೃತನನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ ಕುಶಾಲ್ (22) ಎಂದು ಗುರುತಿಸಲಾಗಿದೆ.

- Advertisement -


ಕಳೆದ ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್ ಗುರುವಾರ ಸಂಜೆ ಸಾವನ್ನಪ್ಪಿದ್ದಾನೆ.


ಡೆಂಗ್ಯೂ ಸೋಂಕಿತನಾಗಿ ಜ್ವರದಿಂದ ಬಳಲುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಇವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಗುಣವಾಗದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.



Join Whatsapp