ಹಾಸನ: ಕಾಡಾನೆ ದಾಳಿಗೆ ಮತ್ತೊಂದು ಬಲಿ

Prasthutha|

ಹಾಸನ: ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕಾರ್ಮಿಕನೋರ್ವ ಕಾಡಾನೆ ದಾಳಿಗೆ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಸಂಭವಿಸಿದೆ.

- Advertisement -

ಕಾರ್ಮಿಕ ವಸಂತ್ (45) ಗುರುವಾರ ಸಂಜೆ ಕೆಲಸ ಮುಗಿಸಿ ತನ್ನ ಆಪ್ತನ ಜೊತೆಗೆ ವಾಪಸ್ ಮರಳುತ್ತಿದ್ದರು. ಈ ವೇಳೆ ಏಕಾಏಕಿ ಕಾಣಿಸಿದ ಒಂಟಿ ಸಲಗ ವಸಂತ್ ಮೇಲೆ ದಾಳಿ ಮಾಡಿದೆ. ಜೊತೆಗಿದ್ದ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಓಡಿ ಅಪಾಯದಿಂದ ಪಾರಾಗಿದ್ದಾರೆ.

ನಿರಂತರವಾಗಿ ಆನೆ ದಾಳಿಗಳಿಗೆ ಜನರು ಬಲಿಯಾಗುತ್ತಿದ್ದು ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವ ವರೆಗೆ ಶವವನ್ನು ಸ್ಥಳದಿಂದ ಮೇಲೆತ್ತಲು ಬಿಡಲ್ಲ ಎಂದು ಜನರು ಧರಣಿ ಆರಂಭಿಸಿದ್ದಾರೆ. ನಿಮ್ಮ ಪರಿಹಾರ ಬೇಡ ನಮ್ಮ ಸಮಸ್ಯೆಗೆ ಪರಿಹಾರ ಕೊಡಿ ಎಂದು ಜನ ಪಟ್ಟು ಹಿಡದಿದ್ದಾರೆ.

Join Whatsapp