ಹಾಸನ: ಪ್ರೇಮ ವೈಫಲ್ಯದಿಂದ ಪ್ರಿಯಕರ ತನ್ನ ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ.
ಸುಚಿತ್ರಾ (20) ಕೊಲೆಯಾದ ಯುವತಿ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ. ಸುಚಿತ್ರಾ ಆಲೂರು ತಾಲೂಕಿನ ಕವಳಗೆರೆ ಗ್ರಾಮದವಳಾಗಿದ್ದು, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಓದುತ್ತಿದ್ದಳು.
ಪ್ರೀತಿಸಲು ನಿರಾಕರಿಸಿದ್ದಕ್ಕೆ ತೇಜಸ್ ಸುಚಿತ್ರಾಳನ್ನು ತನ್ನೊಂದಿಗೆ ಕುಂತಿಬೆಟ್ಟಕ್ಕೆ ಕರೆದೊಯ್ದಿದ್ದಾನೆ. ನಿನ್ನೆ ಮುಂಜಾನೆ ಯುವತಿಯನ್ನು ಒಂಟಿಯಾಗಿ ಕರೆದೊಯ್ದು ಬಳಿಕ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.