ಹಾಸನ: ಪ್ರೀತಂಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಲ ಬಿಜೆಪಿ ಮುಖಂಡರು, ಬಹಿರಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ಮಾಡಿದ್ದಾರೆ.
ಇದರಿಂದಾಗಿ ಜೆಡಿಎಸ್ ನಾಯಕರಿಗೆ ಇರಿಸು ಮುರಿಸು ಉಂಟಾಗಿದೆ. ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಉದ್ದೂರು ಪುರುಷೋತ್ತಮ್ ಸೇರಿ ಹಲವರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಭೇಟಿ ಮಾಡಿದ ಪ್ರೀತಂಗೌಡರ ಆಪ್ತರು, ಉದ್ದೂರು ಪುರುಷೋತ್ತಮ್ ನೇತೃತ್ವದಲ್ಲಿ ಬೆಂಬಲ ಘೋಷಿಸಿ ಪ್ರಚಾರ ಆರಂಭಿಸಿದ್ದಾರೆ.