ಹಾಸನ: ಮದುವೆಗೆ ಒಪ್ಪದಿದ್ದಕ್ಕೆ ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ

Prasthutha|

ಹಾಸನ: ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ.

- Advertisement -


15 ದಿನಗಳ ಹಿಂದೆ ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಅರ್ಪಿತಾ ಮನೆಗೆ, ಸಂಬಂಧಿ ರಾಮು ಮತ್ತು ಪೋಷಕರು ಬಂದಿದ್ದರು. ಮದುವೆ ಪ್ರಸ್ತಾಪಕ್ಕೆ ಶಿಕ್ಷಕಿ ಅರ್ಪಿತಾ ಹಾಗೂ ಪೋಷಕರು ಒಪ್ಪಿರಲಿಲ್ಲ. ಮದುವೆ ಒಪ್ಪದ ಹಿನ್ನೆಲೆಯಲ್ಲಿ ಇಂದು (ನ.30) ಬೆಳಗ್ಗೆ ಅರ್ಪಿತಾ ಅವರನ್ನು ರಾಮು ಅಪಹರಿಸಿರುವ ಆರೋಪ ಕೇಳಿಬಂದಿದೆ.

ಬೆಳಿಗ್ಗೆಯೇ ಘಟನೆ ನಡೆದಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ.



Join Whatsapp