Home ಟಾಪ್ ಸುದ್ದಿಗಳು ಹಾಸನ: ಗೋಡೆ ಕುಸಿದು ವ್ಯಕ್ತಿ ಸಾವು

ಹಾಸನ: ಗೋಡೆ ಕುಸಿದು ವ್ಯಕ್ತಿ ಸಾವು

ಹಾಸನ: ಕಳೆದರೆಡು ದಿನಗಳಿಂದ ಸುರಿದ ಭಾರೀ ಗಾಳಿ ಮಳೆಗೆ ಶಾಲೆ ಗೋಡೆ ಕುಸಿದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ಕೆ.ಹೊಸೂರು ಗ್ರಾಮದ ಶಿವಕುಮಾರ್ (28) ಮೃತಪಟ್ಟವರು.

ರಂಗೇನಹಳ್ಳಿ ಸರ್ಕಾರಿ ಶಾಲೆಯ ಬಳಿ ನಡೆದುಕೊಂಡು ಹೋಗುತ್ತಿದ್ದ ಶಿವಕುಮಾರ್ ಮೇಲೆ ಏಕಾಏಕಿ ಶಾಲಾ ಕಟ್ಟಡ ಕುಸಿದು ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳ್ಳಿ ಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp
Exit mobile version