ಹಾಸನ | ಇಬ್ಬರು ಹೃದಯಾಘಾತಕ್ಕೆ ಬಲಿ

- Advertisement -

ಹಾಸನ: ಕಳೆದ ಕೆಲ ವಾರಗಳಿಂದ ಹೃದಯಾಘಾತದ ಪ್ರಕರಣಗಳು ಜಿಲ್ಲೆಯಲ್ಲಿ ಅಸಾಮಾನ್ಯವಾಗಿ ಹೆಚ್ಚಿದ್ದು, ಶುಕ್ರವಾರವೂ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಂದೂವರೆ ತಿಂಗಳ ಅವಧಿಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.

- Advertisement -

ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದ 21 ವರ್ಷದ ಯುವಕ ಮದನ್, ತಾಯಿ ಜೊತೆ ಚನ್ನಪಟ್ಟಣದಲ್ಲಿ ವಾಸವಿದ್ದನು. ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳ ಗ್ರಾಮದ ಭಾವನ ಮನೆಗೆ ಬಂದಿದ್ದ ಮದನ್, ನಿನ್ನೆ ರಾತ್ರಿ ದಿಢೀರ್ ಎದೆನೋವಿನಿಂದ ಬಳಲಿದ್ದು, ಮನೆಯಲ್ಲಿಯೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ.

ಹಾಸನ ನಗರದ ದಾಸರಕೊಪ್ಪಲಿನಲ್ಲಿ ವಾಸವಿದ್ದ ಬಿ.ಎನ್.ವಿಮಲಾಕ್ಷಿ (55) ಕೂಡ ಹೃದಯಾಘಾತಕ್ಕೆ ಬಲಿ ಆಗಿದ್ದಾರೆ. ವಿಮಲಾ ಅವರು ಮೂಲತಃ ಸಕಲೇಶಪುರದ ತೋಟದಗದ್ದೆ ಗ್ರಾಮದವರಾಗಿದ್ದು, ಅನೇಕ ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದರು. ನಿನ್ನೆ ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತ ಉಂಟಾಗಿ ನಿಧನರಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶುಗರ್ ಲೆವೆಲ್‌ ಹೆಚ್ಚಾಗಿರುವ ಕಾರಣಕ್ಕೆ ಹಾರ್ಟ್ ಅಟ್ಯಾಕ್ ಸಂಭವಿಸಿ ಸಾವಾಗಿರುವ ಸಾಧ್ಯತೆಯಿದೆ ಎಂಬ ಶಂಕೆ ವ್ಯಕ್ತವಾಗಿದೆ.

- Advertisement -


Must Read

Related Articles