ಜೆಡಿಎಸ್ ನಗರಸಭೆ ಸದಸ್ಯ ಕೊಲೆ ಪ್ರಕರಣ: ಹಾಸನ ಸ್ವಯಂಪ್ರೇರಿತ ಬಂದ್, ಭದ್ರತೆ ಹೆಚ್ಚಳ

Prasthutha|

ಹಾಸನ: ಕಳೆದ ರಾತ್ರಿ ಜೆಡಿಎಸ್ ನಗರಪಾಲಿಕೆ ಸದಸ್ಯ ಪ್ರಶಾಂತ್ ರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿತ್ತು. ಘಟನೆ ಹಿನ್ನೆಲೆಯಲ್ಲಿ ಹಾಸನ ನಗರದಲ್ಲಿ ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

- Advertisement -

ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಪ್ರಶಾಂತ್’ಗೆ ಹಿಂದಿನಿಂದ ಆಟೋದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ಪರಾರಿಯಾಗಿದ್ದರು. ಹಾಸನ ನಗರವು ಬೂದಿ ಮುಚ್ಚಿದ ಕೆಂಡದಂತಿದ್ದು, ಪ್ರಶಾಂತ್ ಮೃತದೇಹ ಹಾಸನದ ಶವಾಗಾರದಲ್ಲಿಡಲಾಗಿದ್ದು ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದೆ.

ಹಾಸನ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಎಸ್ಪಿ ನಂದಿನಿ, ಪೆನ್ಷನ್ ಮೊಹಲ್ಲಾ ಪೊಲೀಸರು ಸೇರಿದಂತೆ ಶ್ವಾನದಳ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆಸ್ಪತ್ರೆಯ ಮುಂಭಾಗದಲ್ಲಿ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಭದ್ರತೆಗಾಗಿ ಇತರೆ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ ಎಂದು ಶ್ರೀನಿವಾಸ ಗೌಡ ತಿಳಿಸಿದ್ದಾರೆ.

Join Whatsapp