Home ಟಾಪ್ ಸುದ್ದಿಗಳು ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಹಾಸನ ವಿಮೆನ್ ಇಂಡಿಯಾ ಮೂವ್ಮೆಂಟ್’ನಿಂದ ಪ್ರತಿಭಟನೆ

ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಹಾಸನ ವಿಮೆನ್ ಇಂಡಿಯಾ ಮೂವ್ಮೆಂಟ್’ನಿಂದ ಪ್ರತಿಭಟನೆ

ಹಾಸನ: ಕುಸ್ತಿಪಟುಗಳ ಮೇಲೆ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ನಡೆಸಿದ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ದೆಹಲಿಯ ಜಂತರ್ ಮಂತರ್ ನಲ್ಲಿ ಕುಸ್ತಿ ಪಟು ಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಶನಿವಾರ ಹಾಸನ ವಿಮೆನ್ ಇಂಡಿಯಾ ಮೂವ್ಮೆಂಟ್ ಹಾಸನ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ಕಳೆದ ಮೂರು ತಿಂಗಳಿನಿಂದ ದೆಹಲಿಯ ಜಂತ‌ ಮಂತರ್ ನಲ್ಲಿ ಕುಸ್ತಿಪಟುಗಳು ಪ್ರತಿಭಟನೆಯನ್ನು ನಡೆಸುತ್ತಿದ್ದು ಆರೋಪಿ, ಬಿಜೆಪಿ ಸಂಸದನ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಸಹ ಅವರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಈ ದೇಶಕ್ಕೆ ಕೀರ್ತಿಯನ್ನು ತಂದಂತಹ ಹೆಮ್ಮೆಯ ಮಹಿಳಾ ಕುಸ್ತಿಪಟುಗಳಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಅರೋಪಿಯನ್ನು ಬಂಧಿಸಲು ಕೇಂದ್ರ ಸರಕಾರವು ತಾರತಮ್ಯ ಮಾಡುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

Join Whatsapp
Exit mobile version