ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ: ಎಸ್ಪಿ ಮುಖಂಡ ಆಝಂ ಖಾನ್’ಗೆ 3 ವರ್ಷ ಜೈಲು ಶಿಕ್ಷೆ

Prasthutha|

ಲಕ್ನೋ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಆಝಂ ಖಾನ್ ಅವರಿಗೆ ರಾಂಪುರ ನ್ಯಾಯಾಲಯ ದೋಷಿಯೆಂದು ಘೋಷಿಸಿದ್ದು, ಆಝಂ ಖಾನ್ ಮತ್ತು ಇತರ ಇಬ್ಬರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 2 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -

2019ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದ ಐಎಎಸ್ ಅಧಿಕಾರಿ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ದ್ವೇಷಪೂರಿತ ಭಾಷಣವನ್ನು ಮಾಡಿದ ಪ್ರಕರಣ ದಾಖಲಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಸುಪ್ರೀಮ್ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬಳಿಕ ಈ ವರ್ಷದ ಆರಂಭದಲ್ಲಿ ಆಝಂ ಖಾನ್ ಅವರನ್ನು ಬಿಡುಗಡೆಗೊಳಿಸಲಾಗಿತ್ತು. ಸದ್ಯ ಅವರು ಭ್ರಷ್ಟಾಚಾರ, ವಂಚನೆ ಸೇರಿದಂತೆ ಸುಮಾರು 90 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

Join Whatsapp