ಪ್ರಧಾನಿಯಿಂದಲೇ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ

Prasthutha|

ರಾಜಸ್ಥಾನ: ದೇಶದ ಪ್ರಧಾನ ಮಂತ್ರಿಯೇ ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗೈದ ದುರಂತ ಘಟನೆ‌ ನಡೆದಿದೆ. ರಾಜಸ್ಥಾನದ ಬನ್ಸಾರ ಎಂಬಲ್ಲಿ ನಡೆದಿದೆ. ಪ್ರಧಾನಿ ಸ್ಥಾನದಲ್ಲಿರುವ ನರೇಂದ್ರ ಮೋದಿ ತಮ್ಮ ಚುನಾವಣಾ ಭಾಷಣದಲ್ಲಿ ಧರ್ಮವನ್ನು ಎಳೆದು ತರುವ ಮೂಲಕ ಮಾದರಿ ನೀತಿ ಸಂಹಿತೆಯನ್ನೂ ಉಲ್ಲಂಘಿಸಿದ ಘಟನೆ ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದಿದೆ.

- Advertisement -

ಬನ್ಸ್ವಾರದಲ್ಲಿ ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ. ಟೀಕಿಸುವ ಭರದಲ್ಲಿ ಮುಸ್ಲಿಂ ಸಮುದಾಯವನ್ನೂ ಎಳೆದು ತಂದಿದ್ದಾರೆ. ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಸಮುದಾಯಕ್ಕೆ ಹೆಚ್ಚು ಸಂಪತ್ತನ್ನು ಹಂಚುವುದೇ ಕಾಂಗ್ರೆಸ್ ಗ್ಯಾರಂಟಿ ಎಂದಿದ್ದಾರೆ.

ತಾಯಂದಿರು, ಸಹೋದರಿಯರ ಬಂಗಾರವನ್ನು ಲೆಕ್ಕ ಹಾಕುವುದಾಗಿ, ಅದರ ಬಗ್ಗೆ ಮಾಹಿತಿ ಪಡೆಯುವುದಾಗಿ, ನಂತರ ಸಂಪತ್ತನ್ನು ಮರು ಹಂಚಿಕೆ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ಹೇಳುತ್ತದೆ. ಅದನ್ನು ಯಾರಿಗೆ ಹಂಚುತ್ತಾರೆ? ಮುಸ್ಲಿಮರು ದೇಶದ ಸಂಪತ್ತಿನ ಮೊದಲ ಹಕ್ಕುದಾರರು ಎಂದು ಮನಮೋಹನ್ ಸಿಂಗ್ ಸರ್ಕಾರ ಹೇಳಿತ್ತು. ಅದರ ಅರ್ಥ, ಹೆಚ್ಚು ಮಕ್ಕಳು ಇರುವವರಿಗೆ ಹಂಚಿಕೆ ಆಗುತ್ತದೆ. ನುಸುಳುಕೋರರಿಗೆ ನಿಮ್ಮ ಸಂಪತ್ತು ಹಂಚಿಕೆಯಾಗುತ್ತದೆ. ನೀವು ಕಷ್ಟದಿಂದ ಸಂಪಾದಿಸಿದ ಹಣ ನುಸುಳುಕೋರರ ಪಾಲಾಗಲೇ? ಅದಕ್ಕೆ ನಿಮ್ಮ ಸಮ್ಮತಿ ಇದೆಯೇ’ ಎಂದು ಮೋದಿ ಸಭಿಕರನ್ನಯ ಪ್ರಶ್ನಿಸಿದ್ದಾರೆ.

- Advertisement -

ಭಾರತದ ಪ್ರಧಾನಿಯ ದ್ವೇಷ ಭಾಷಣದ ಸುಮಾರು ಒಂದೂವರೆ ನಿಮಿಷದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಪ್ರಜ್ಞಾವಂತರ ತೀವ್ರ ಟೀಕೆಗೆ ಕಾರಣವಾಗಿದೆ.

ಈ ವೀಡಿಯೊವನ್ನು ಹಂಚಿಕೊಂಡಿರುವ ನೆಟ್ಟಿಗರೊಬ್ಬರು, ಪ್ರಧಾನಿ ಸ್ಥಾನದಲ್ಲಿ ಕುಳಿತ ವ್ಯಕ್ತಿ ಈ ಮಟ್ಟಕ್ಕೆ ಇಳಿಯುವುದು ದೇಶದ ದುರಂತ ಎಂದಿದ್ದಾರೆ. ಇನ್ಮೊಬ್ಬರು, ಇದು ಪ್ರಧಾನಿ ಮೋದಿ ಪಾಲಿಗೆ ವಿನಾಶಕಾರಿ. ಮೊದಲ ಹಂತದ ಮತದಾನದ ನಂತರ ಪ್ರಧಾನಿ ಮೋದಿ ಈ ಹಂತಕ್ಕೆ ಇಳಿದಿದ್ದಾರೆ. ಇದು 10 ವರ್ಷಗಳ ಕಾಲ ದೇಶವನ್ನು ಆಳಿರುವ ಪ್ರಧಾನಿ ಮೋದಿ ಪರಿಸ್ಥಿತಿ. ತೀರಾ ಹತಾಶರಾಗಿರುವ ಮೋದಿ ಇಂತಹ ವಿವಾದಾತ್ಮಕ ಮಾತುಗಳನ್ನಾಡಿದ್ದಾರೆ. ಚುನಾವಣಾ ಆಯೋಗ ಇನ್ನೂ ತನ್ನ ನಿದ್ರೆಯನ್ನು ಮುಂದುವರಿಸಿದರೆ ಬಹಳ ಕಷ್ಟವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Join Whatsapp