ದ್ವೇಷ ಭಾಷಣ: ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ ದೋಷಿ ಎಂದ ನ್ಯಾಯಾಲಯ

Prasthutha|

ಲಕ್ನೋ: 2019ರ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ನಾಯಕ ಆಝಂ ಖಾನ್ ಅವರನ್ನು ರಾಂಪುರ ನ್ಯಾಯಾಲಯ ಗುರುವಾರ ದೋಷಿ ಎಂದು ಘೋಷಿಸಿದ್ದು, ಶೀಘ್ರದಲ್ಲೇ ಶಿಕ್ಷೆಯನ್ನು ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಮುಖ್ಯಮಂತ್ರಿ ಆದಿತ್ಯನಾಥ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದ ಐಎಎಸ್ ಅಧಿಕಾರಿ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದಕ್ಕಾಗಿ ಆಝಂ ಖಾನ್ ವಿರುದ್ಧ ಆರೋಪ ಹೊರಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅವರ ವಿರುದ್ದ ಐಪಿಸಿಯ ಸೆಕ್ಷನ್ 153 ಎ, 505-1 ಮತ್ತು ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಸೆಕ್ಷನ್ 125 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಮಧ್ಯೆ ಆಝಂ ಖಾನ್ ಸೇರಿದಂತೆ ಯಾವುದೇ ಶಾಸಕ, ಎಂಎಲ್ಸಿ ಅಥವಾ ಸಂಸದರು ಕ್ರಿಮಿನಲ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದರೆ ಮತ್ತು ಕನಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆ ಅನುಭವಿಸಿದರೆ ಸದನದ ಸದಸ್ಯತ್ವವನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

- Advertisement -

ವಂಚನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ನಂತರ ಆಝಂ ಖಾನ್ ಈ ವರ್ಷದ ಆರಂಭದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು.



Join Whatsapp