ನವದೆಹಲಿ: ದೆಹಲಿಯ ಬುರಾರಿ ಎಂಬಲ್ಲಿ ಹಿಂದೂ ಮಹಾ ಪಂಚಾಯತ್ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಮುಖಂಡ ಯತಿ ನರಸಿಂಹಾನಂದ ಗಿರಿ ವಿರುದ್ಧ ಮತ್ತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಾತ್ರವಲ್ಲ ಇದಕ್ಕೆ ಸಂಬಂಧಿಸಿದಂತೆ ಇನ್ನಿತರ ಭಾಷಣಕಾರರ ಮೇಲೂ ಕೇಸ್ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಈ ಮಧ್ಯೆ ಆರೋಪಿಗಳ ಮೇಲೆ ಕಾನೂನು ತಜ್ಞರ ಸಲಹೆ ಪಡೆದ ಬಳಿಕ ಸಂಘಪರಿವಾರದ ಮುಖಂಡರ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಝಿಯಾಬಾದ್ ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ, ಹರಿದ್ವಾರ ಮುಸ್ಲಿಮರ ನರಮೇಧಕ್ಕೆ ಕರೆನೀಡಿದ್ದ ಕಾರ್ಯಕ್ರಮದ ಆಯೋಜಕ ಯತಿ ನರಸಿಂಹಾನಂದ, ಶಸ್ತ್ರಾಸ್ತ್ರ ತೆಗೆಯುವಂತೆ ಹಿಂದೂಗಳನ್ನು ಪ್ರೇರೇಪಿಸಿದ್ದನು.
ಸದ್ಯ ಹರಿದ್ವಾರ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಯತಿ, ದೆಹಲಿಯ ದ್ವೇಷ ಭಾಷಣದ ಹಿನ್ನೆಲೆಯಲ್ಲಿ ಈತನ ವಿರುದ್ಧ ಐಪಿಸಿ ಸೆಕ್ಷನ್ 188, 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.