Home ಟಾಪ್ ಸುದ್ದಿಗಳು ದ್ವೇಷ ಭಾಷಣ: ಕೇರಳದ ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ವಿರುದ್ಧ ಪ್ರಕರಣ ದಾಖಲು

ದ್ವೇಷ ಭಾಷಣ: ಕೇರಳದ ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ವಿರುದ್ಧ ಪ್ರಕರಣ ದಾಖಲು

ಕೊಟ್ಟಾಯಂ: ಧಾರ್ಮಿಕ ದ್ವೇಷವನ್ನು ಕೆರಳಿಸುವಂತಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕೇರಳ ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಖಾಸಗಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಾರ್ಜ್ ಅವರು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

ಮುಸ್ಲಿಂ ಯೂತ್ ಲೀಗ್ ಮುನ್ಸಿಪಲ್ ಸಮಿತಿ ನೀಡಿದ ದೂರಿನ ಆಧಾರದ ಮೇಲೆ ಕೊಟ್ಟಾಯಂನ ಎರಟ್ಟುಪೇಟೆ ಪೊಲೀಸರು ಜಾರ್ಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಜಾರ್ಜ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Join Whatsapp
Exit mobile version