Home ಟಾಪ್ ಸುದ್ದಿಗಳು ದ್ವೇಷ ಭಾಷಣ । ನಗುತ್ತಾ ಹೇಳಿದರೆ ಅಪರಾಧವಲ್ಲ; ದೆಹಲಿ ಹೈಕೋರ್ಟ್

ದ್ವೇಷ ಭಾಷಣ । ನಗುತ್ತಾ ಹೇಳಿದರೆ ಅಪರಾಧವಲ್ಲ; ದೆಹಲಿ ಹೈಕೋರ್ಟ್

ನವದೆಹಲಿ: ಶಾಹೀನ್‌ಬಾಗ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಮೇಲಿನ ದ್ವೇಷ ಭಾಷಣದ ಕುರಿತು ಪ್ರತಿಕ್ರಿಯಿಸಿದ ದೆಹಲಿ ಹೈಕೋರ್ಟ್, ದ್ವೇಷಪೂರಿತ ಭಾಷಣಗೈದ ವ್ಯಕ್ತಿಗಳು ನಗುತ್ತಾ ಹೇಳಿಕೆ ನೀಡಿದರೆ ಅದು ಅಪರಾಧವಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

ಶಾಹೀನ್‌ಬಾಗ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ಕುರಿತು ಬಿಜೆಪಿಯ ದ್ವೇಷ ಭಾಷಣದ ಬಗ್ಗೆ ಪ್ರಕರಣ ದಾಖಲಿಸುವಂತೆ ಕೋರಿ ಸಿಪಿಐ ಎಂ ನಾಯಕಿ ಬೃಂದಾ ಕಾರಟ್ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸುವಾಗ ಕೋರ್ಟ್ ಈ ಮೇಲಿನಂತೆ ಪ್ರತಿಕ್ರಿಯಿಸಿದೆ.

2021ರ ಆಗಸ್ಟ್ 26 ರಂದು ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಭಾಷಣಗೈದ ಆರೋಪದಲ್ಲಿ ಬಿಜೆಪಿ ಮುಖಂಡರಾದ ಅನುರಾಗ್ ಠಾಕೂರ್ , ಸಂಸದ ಪ್ರವೇಶ್ ವರ್ಮಾ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ಬೃಂದಾ ಕಾರಟ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ಆದೇಶಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು ಭಾಷಣದಲ್ಲಿ ಕೋಮುವಾದಿ ಉದ್ದೇಶ ಎಲ್ಲಿ ಅಡಗಿದೆ ಎಂದು ಪ್ರಶ್ನಿಸಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲರಾದ ರಾರಾ ನರುಲಾ, ಆದಿತ್ ಎಸ್. ಪೂಜಾರಿ ವಾದಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 153 ಎ, 153 ಬಿ, 295 ಎ, 298, 504, 505, 506 ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಕೋರಿ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ರಿಥಾಲಾ ಎಂಬಲ್ಲಿ ನಡೆದ ರ‍್ಯಾಲಿಯಲ್ಲಿ ಕೇಂದ್ರ ಸಚಿವ ಠಾಕೂರ್ ಅವರು ಜನವರಿ 27, 2020 ರಂದು ಸಿಎಎ ವಿರೋಧಿ ಪ್ರತಿಭಟನೆ ನಡೆಸಿದ ಮುಸ್ಲಿಮರ ನರಮೇಧಕ್ಕೆ ಕರೆನೀಡುವ ಪ್ರಚೋದನಾಕಾರಿ ಘೋಷಣೆಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಸಿಪಿಐ (ಎಂ) ನಾಯಕಿ ಅರ್ಜಿ ಸಲ್ಲಿಸಿದ್ದರು.

Join Whatsapp
Exit mobile version