ಪುಣೆ: ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಛತ್ತೀಸ್ ಗಢದ ರಾಯಪುರದಿಂದ ಕಾಳಿಚರಣ್ ಮಹಾರಾಜ್ ಅವರನ್ನು ಛತ್ತೀಸ್ ಗಢ ಪೊಲೀಸರಿಂದ ಪುಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ವಾರ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದ್ವೇಷಪೂರಿತ ಭಾಷಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ಸಂಘಪರಿವಾರದ ಮುಖಂಡರುಗಳಾದ ಕಾಳಿಚರಣ್, ಮಿಲಿಂದ್ ಎಕ್ಬೋಟೆ, ನಿವೃತ್ತ ಕ್ಯಾಪ್ಟನ್ ದಿಗೇಂದ್ರ ಕುಮಾರ್ ಮತ್ತು ಇತರ ಮೂವರ ವಿರುದ್ಧ ಐಪಿಸಿ ಸೆಕ್ಷನ್ 295 (ಎ), 298, 505 (2) ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ರಾಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾರಣಕ್ಕಾಗಿ ಛತ್ತೀಸ್ ಗಢ, ಮಹಾರಾಷ್ಟ್ರದಲ್ಲಿ ಕಾಳಿಚರಣ್ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಿಂದ ಛತ್ತೀಸ್ ಗಢ ಪೊಲೀಸರು ಆತನನ್ನು ಬಂಧಿಸಿದ್ದರು.