ಹತ್ರಾಸ್: ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಮಿನಿ ಟ್ರಕ್ ಮತ್ತು ಬಸ್ ಡಿಕ್ಕಿ ಹೊಡೆದು 15 ಮಂದಿ ಮೃತಪಟ್ಟಿದ್ದು, 16 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಸ್ ಹತ್ರಾಸ್‌ನಿಂದ ಆಗ್ರಾಕ್ಕೆ ತೆರಳುತ್ತಿದ್ದು, ಮಿನಿ ಲಾರಿಯಲ್ಲಿದ್ದವರ ಸೇವಾಲ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ಘಟನೆ ನಡೆದಿದೆ.
ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಾಹಿತಿ ಬಂದ ಕೂಡಲೇ ಹಥ್ರಾಸ್ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ತಲುಪಿದ್ದಾರೆ.
ಅಪಘಾತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಲಿಘರ್ ಜಿಲ್ಲಾಧಿಕಾರಿ ಚೈತ್ರಾ ವಿ., ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ 7 ಮಂದಿ ಪುರುಷರು, ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿಪ್ರಸ್ತುತ 15 ಮಂದಿ ಮೃತಪಟಿದ್ದಾರೆ ಎಂದು ತಿಳಿಸಿದ್ದಾರೆ.