ಮೈನ್ ಪುರಿ: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 123 ಜನರ ಸಾವಿಗೆ ಕಾರಣವಾದ ಹತ್ರಾಸ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಸೂರಜ್ ಪಾಲ್ ಸಿಂಗ್ ಕೊನೆಗೂ ಮೌನ ಮುರಿದಿದ್ದಾರೆ.
“ಅವ್ಯವಸ್ಥೆ ಸೃಷ್ಟಿಸಿದವರನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದ್ದಾರೆ.
ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ವಾರದ ಆರಂಭದಲ್ಲಿ ಹತ್ರಾಸ್ ಜಿಲ್ಲೆಯ ಫುಲಾರಿ ಗ್ರಾಮದಲ್ಲಿ ನಡೆದ ‘ಸತ್ಸಂಗ’ದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಜುಲೈ 2ರ ಘಟನೆಯಿಂದ ನನಗೆ ಅತೀವ ದುಃಖವಾಗಿದೆ. ದೇವರು ನಮಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ. ದಯವಿಟ್ಟು ಸರ್ಕಾರ ಮತ್ತು ಆಡಳಿತದ ಮೇಲೆ ನಂಬಿಕೆ ಇಡಿ. ಅವ್ಯವಸ್ಥೆ ಸೃಷ್ಟಿಸಿದವರನ್ನು ಕ್ಷಮಿಸುವುದಿಲ್ಲ ಎಂಬ ನಂಬಿಕೆ ನನಗಿದೆ. ಸಮಿತಿಯ ಸದಸ್ಯರಿಗೆ ದುಃಖಿತ ಕುಟುಂಬಗಳು ಮತ್ತು ಗಾಯಾಳುಗಳೊಂದಿಗೆ ನಿಲ್ಲುವಂತೆ ಮತ್ತು ಅವರ ಜೀವನದುದ್ದಕ್ಕೂ ಅವರಿಗೆ ಸಹಾಯ ಮಾಡುವಂತೆ ನನ್ನ ವಕೀಲ ಎಪಿ ಸಿಂಗ್ ಮೂಲಕ ವಿನಂತಿಸಿದ್ದೇನೆ” ಎಂದು ಹೇಳಿದ್ದಾರೆ.