ಬೆಂಗಳೂರು: ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿ ಸರಿ ಮಾಡಲು ಹೇಳಿದ್ದೇನೆ. ಇದಕ್ಕೆ ಬೇರೆ ಬಣ್ಣ ಕಟ್ಟೋದು ಬೇಡ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ಏರಿಯಾದ ರಸ್ತೆ ಗುಂಡಿ ಮುಚ್ಚುವ ಬಗ್ಗೆ ಟ್ವೀಟ್ ಮಾಡಿದ್ದ ವಿಚಾರಕ್ಕೆ ಸ್ಪಷ್ಟನೆ ನೀಡಿದ ಅವರು, ಸಾರ್ವಜನಿಕರ ಪರವಾಗಿ ಅಧಿಕಾರಿಗಳಿಗೆ ಮಾಹಿತಿ ಕೊಡುವ ಪ್ರಯತ್ನ ಮಾಡಿದ್ದೇನೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಸಾರ್ವಜನಿಕರ ಪರವಾಗಿ ಕೆಲಸ ಮಾಡಬೇಕು. ಅಧಿಕಾರಿಗಳಿಗೆ ಮಾಹಿತಿ ಕೊಡೋಕೆ ನಾನಾ ಮಾರ್ಗಗಳು ಇವೆ. ಫೋನ್ ಮಾಡಬಹುದು, ಪತ್ರ ಬರೆಯಬಹುದು. ವೀಡಿಯೋ ಕಳುಹಿಸಬಹುದು. ನಾವು ಅದನ್ನು ಅವರ ಗಮನಕ್ಕೆ ತಂದಿದ್ದೇನೆ. ನನ್ನ ಕ್ಷೇತ್ರದಲ್ಲಿ ಜನ ಸಮಸ್ಯೆ ತಂದಿದ್ದರು. ಅದನ್ನು ಸರಿ ಮಾಡಲು ಹೇಳಿದ್ದೇನೆ. ಅದಕ್ಕೆ ನೀವು ಬಣ್ಣ ಕಟ್ಟಿ ಏನೇನೋ ಹೇಳಿದರೆ ಅದು ಅವರಿಗೆ ಬಿಟ್ಟದ್ದು. ನಮಗೆ ಜನರ ಕೆಲಸ ಸರ್ಕಾರದಿಂದ ಆಗಬೇಕು. ಆ ಒಂದು ಪ್ರಯತ್ನ ನಾನು ಮಾಡುತ್ತಿದ್ದೇನೆ ಎಂದರು.
ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. @bbmpcommr ಅಥವಾ @BMRCL MD ಯಾರಾದ್ರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ. pic.twitter.com/qRDqy5NEzZ
— Krishna Byre Gowda (@krishnabgowda) August 14, 2024