ಹಾವೇರಿ | ಭೀಕರ ರಸ್ತೆ ಅಪಘಾತ: 13 ಜನ ಸಾವು

Prasthutha|

ಹಾವೇರಿ: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 13 ಜನರು ಮೃತಪಟ್ಟಿದ್ದಾರೆ.

- Advertisement -


ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.


ಪರಶುರಾಮ್ (45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ ಬಾಯಿ (65), ಪುಣ್ಯ (50), ಮಂಜುಳಾಬಾಯಿ, ಚಾಲಕ ಆದರ್ಶ್ (23), ಮಾನಸ (24), ರೂಪಾ (40), ಮಂಜುಳಾ (50) ಮೃತರು ಮೃತಪಟ್ಟವರು. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

Join Whatsapp