ಹಾವೇರಿ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Prasthutha|

ಹಾವೇರಿ: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

- Advertisement -


ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ನೀಡುತ್ತೇವೆ ಎಂದು ಹೇಳಿದರು. ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದರು.

Join Whatsapp