ಹಾವೇರಿ ಪಟಾಕಿ ಅವಘಡ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ

Prasthutha|

ಹಾವೇರಿ: ಹಾವೇರಿ ಹೊರವಲಯದ ಸಾತೇನಹಳ್ಳಿ ಬಳಿ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು. ಈ ಗೋಡೌನ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

- Advertisement -

ಪಟಾಕಿ ಅವಘಡದ ಬಗ್ಗೆ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ಸ್ಥಳಕ್ಕೆ ಹೊಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೆರೆಗೆ ನಿಗದಿಯಾಗಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಶಿವಾನಂದ ಪಾಟೀಲ್, ಬೆಂಗಳೂರಿನಿಂದ ಹಾವೇರಿಗೆ ತೆರಳಿದ್ದಾರೆ. ನಾಳೆ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.