ಹಾವೇರಿ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಹಾವೇರಿಯ ಹಂಸಭಾವಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಂಸಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಅರಳೀಕಟ್ಟಿ ಗ್ರಾಮದ ಮಂಜಪ್ಪ ಚನ್ನಪ್ಪನವರ(38) ಮೃತ ವ್ಯಕ್ತಿಯಾಗಿದ್ದಾರೆ. ಇದೇ ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕ ಎನ್ನಲಾಗಿದೆ. ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹೋರಿ ಬೆದರಿಸುವ ಸ್ಪರ್ಧೆಯ ವೇಳೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬ ದುರ್ಮರಣ, ಇಬ್ಬರು ಗಂಭೀರವಾಗಿ ಗಾಯಗೊಂಡ ಬೆನ್ನಲ್ಲೇ, ಹೋರಿ ಬೆದರಿಸುವ ಹಬ್ಬವನ್ನು ಹಂಸಭಾವಿ ಪೊಲೀಸರು ಸ್ಥಗಿತಗೊಳಿಸಿದ್ದಾರೆ.