ಲಂಚ ಸ್ವೀಕರಿಸುತ್ತಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

Prasthutha|

ಹಾವೇರಿ: ಈ-ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದಾಗ ಜಿಲ್ಲೆಯ ಹಿರೇಕೆರೂರು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

- Advertisement -

ಹಿರೇಕೆರೂರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪಂಪಾಪತಿ ನಾಯ್ಕ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಈ ಸ್ವತ್ತು ಮಾಡಿಕೊಡಲು ಮೊದಲ ಕಂತಾಗಿ 10 ಸಾವಿರ ರೂ. ಪಡೆದು ಮತ್ತೆ 10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಹಿರೇಕೆರೂರಿನ ಮೊಹಮ್ಮದ್ ಅಖಿಬ್ ಮತ್ತೂರು ಎಂಬುವವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಶನಿವಾರ ಹಿರೇಕರೂರು ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಪಂಪಾಪತಿ ನಾಯ್ಕ ಅವರು 10 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ಯಶಸ್ವಿಯಾಗಿ ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.

ಹಿರೇಕೆರೂರು ಪಟ್ಟಣದಲ್ಲಿರುವ ಅವರ ಮನೆ ಹಾಗೂ ಕಚೇರಿಯಲ್ಲಿಯೂ ಶೋಧನೆ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಮನೆಯಲ್ಲಿ ಸುಮಾರು 3.50 ಲಕ್ಷ ರೂ. ಹಾಗೂ ಇತರೆ ದಾಖಲಾತಿಗಳು ದೊರತಿವೆ. ಈ ಬಗ್ಗೆ ಹೆಚ್ಚಿನ ಪರಿಶೀಲನೆ ಕೈಗೊಂಡಿದ್ದು ತನಿಖೆ ಮುಂದುವರೆದಿದೆ.

Join Whatsapp