ಹಾವೇರಿ ಗಲಾಟೆ: ಆರೋಪಿ ನಾಶಿಪುಡಿಗೂ ಇದಕ್ಕೂ ಸಂಬಂಧವಿಲ್ಲ; ಪರಮೇಶ್ವರ್

Prasthutha|

ಬೆಂಗಳೂರು: ಹಾವೇರಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಾಟೆ ಯಾರು ಮಾಡಿದರು ಅಂತ ವಿಚಾರಣೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

- Advertisement -

ಕರ್ನಾಟಕ ಮತ್ತು ನೆರೆಯ ಆಂಧ್ರಪ್ರದೇಶದ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಬ್ಯಾಡಗಿ ಮಾರುಕಟ್ಟೆಗೆ ಆಗಮಿಸಿದ್ದು, ಮೆಣಸಿನಕಾಯಿ ಬೆಲೆಯಲ್ಲಿ ದಿಢೀರ್ ಕುಸಿತ ಕಂಡು ಆಘಾತಕ್ಕೊಳಗಾಗಿದ್ದಾರೆ. ಇದರಿಂದ ನಿನ್ನೆ (ಮಾ.11) ರಂದು ಘಟನೆಯಲ್ಲಿ 6-7 ಗಾಡಿಗಳನ್ನು ಸುಟ್ಟು ಹಾಕಿದ್ದಾರೆ. ಏಕಾಏಕಿ ದರ ಅಷ್ಟು ಯಾಕೆ ಕುಸಿದಿದೆ ಅಂತ ಗೊತ್ತಿಲ್ಲ. ಇದನ್ನ ತನಿಖೆ ಮಾಡಿ ತಿಳಿಸಿ ಅಂತ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದರು.


ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ಬಂಧಿತವಾಗಿರುವ ನಾಶಿಪುಡಿಗೂ ಮತ್ತು ಈ ಘಟನೆಗೂ ಸಂಬಂಧವಿದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಬೆಂಗಳೂರಿನಲ್ಲಿ ಉತ್ತರಿಸಿದ ಅವರು, ಅದಕ್ಕೂ, ಇದಕ್ಕೂ ಸಂಬಂಧ ಇಲ್ಲ. ಯಾರು ಕಾರಣ ಅಂತ ಕಂಡುಹಿಡಿಯಬೇಕಿದೆ. ಇವತ್ತಿನಿಂದ ಎಲ್ಲ ಪ್ರಕ್ರಿಯೆ ಮತ್ತೆ ಆರಂಭವಾಗುತ್ತದೆ ಎಂದರು.

Join Whatsapp