ಹಾವೇರಿ: ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಮರ ಮನೆ, ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಾವೇರಿಯ ರಟ್ಟಹಳ್ಳಿ ಎಂಬಲ್ಲಿ ಮಂಗಳವಾರ ಮಧ್ಯಹ್ನ ನಡೆದಿದೆ.
ರಟ್ಟಹಳ್ಳಿಯಲ್ಲಿ ಮುಸ್ಲಿಮರಿಗೆ ಸೇರಿದ ಅಂಗಡಿ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂ ಗೊಳಿಸಲಾಗಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ರಟ್ಟಿಹಳ್ಳಿ ಪಟ್ಟಣದ ಕೆಲವು ಉರ್ದು ಶಾಲೆಗಳ ಮೇಲೂ ಕಲ್ಲು ತೂರಾಟ ನಡೆದಿದೆ. ಘಟನೆಯಿಂದ ಆಘಾತಕ್ಕೊಳಗಾಗಿರುವ ವಿದ್ಯಾರ್ಥಿಗಳು ಶಾಲೆಯಿಂದ ಹೊರಬಂದು ಕಣ್ಣೀರಿಡುತ್ತಿದ್ದಾರೆ. ಮುಸ್ಲಿಂ ಆಟೋ ಚಾಲಕರೊಬ್ಬರನ್ನು ಸಂಘಪರಿವಾರದ ಕಾರ್ಯಕರ್ತರು ಥಳಿಸಿದ್ದಾರೆ.
ಮುಸ್ಲಿಮ್ ಬಾಹುಳ್ಯದ ಪ್ರದೇಶಗಳಿಗೆ ನುಗ್ಗಿದ ಸಂಘಪರಿವಾರದ ಗೂಂಡಾಗಳು ಮುಸ್ಲಿಮ್ ಯುವಕರು, ಮಹಿಳೆಯರು, ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇದೀಗ ಮುಸ್ಲಿಮರು ವಾಸಿಸುವ ಪ್ರದೇಶಗಳು ಹಾಗೂ ಮಸೀದಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.