Home ಟಾಪ್ ಸುದ್ದಿಗಳು ದರ್ಶನ್ ಜಾಮೀನು ಅರ್ಜಿ ಅ.28ಕ್ಕೆ ಮುಂದೂಡಿದ ಹೈಕೋರ್ಟ್

ದರ್ಶನ್ ಜಾಮೀನು ಅರ್ಜಿ ಅ.28ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಗೆ ಕೆಳಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಗಲಿಲ್ಲ ಎಂದು ದರ್ಶನ್ ಪರ ವಕೀಲರು ಹೈಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಹಾಕಿದ್ದರು. ಹೈಕೋರ್ಟ್ನಲ್ಲಿ ಇಂದು (ಅಕ್ಟೋಬರ್ 22) ಮೊದಲ ಬಾರಿಗೆ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿಯ ಮುಂದಿನ ವಿಚಾರಣೆಯನ್ನು ನ್ಯಾಯಮೂರ್ತಿಗಳು ಮುಂದೂಡಿದ್ದಾರೆ.


ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆದಿದೆ. ಸಿವಿ ನಾಗೇಶ್ ಅವರು ದರ್ಶನ್ ಪರವಾಗಿ ವಾದ ಮಂಡನೆ ಆರಂಭಿಸಿ, ದರ್ಶನ್ ಗೆ ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದು, ಅವರನ್ನು ನಿನ್ನೆ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದರ್ಶನ್ ಗೆ ಚಿಕಿತ್ಸೆಯ ಅಗತ್ಯವಿದೆ. ಹಾಗಾಗಿ ಜಾಮೀನು ಕೋರುತ್ತಿದ್ದೇವೆ ಎಂದು ಹೇಳಿದರು.


ಸಿವಿ ನಾಗೇಶ್ ಅವರ ಮಾತು ಆಲಿಸಿ, ಜೈಲಧಿಕಾರಿಗಳಿಂದ ದರ್ಶನ್ ರ ಆರೋಗ್ಯ ಸ್ಥಿತಿಯ ವರದಿಯನ್ನು ಕೇಳಿದರು. ಬಳಿಕ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಲಾಯಿತು.


ಅಕ್ಟೋಬರ್ 28ರ ಒಳಗಾಗಿ ಬಳ್ಳಾರಿ ಜೈಲು ಅಧಿಕಾರಿಗಳು ದರ್ಶನ್ ರ ಆರೋಗ್ಯ ಸ್ಥಿತಿಯ ಬಗ್ಗೆ ವರದಿಯನ್ನು ಹೈಕೋರ್ಟ್ ಗೆ ನೀಡಬೇಕಿದ್ದು, ವರದಿ ಆಧರಿಸಿ ದರ್ಶನ್ ಗೆ ಜಾಮೀನು ನೀಡಬೇಕೊ ಇಲ್ಲವೋ ಅಥವಾ ಜೈಲಿನಲ್ಲಿಯೇ ಚಿಕಿತ್ಸೆ ಮುಂದುವರೆಸಬೇಕೋ ಎಂಬುದನ್ನು ನಿಶ್ಚಯ ಮಾಡಲಾಗುತ್ತದೆ.

Join Whatsapp
Exit mobile version