ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಶುಕ್ರವಾರ ನಡೆಯಲಿದೆ. ಆ ದಿನ ಮತದಾನ ಮಾಡಿ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತೋರಿಸಿದವರಿಗೆ ಉಚಿತವಾಗಿ ಆಹಾರ ನೀಡಲು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್ನ ಸದಸ್ಯರಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.
ಈ ವಿಚಾರವಾಗಿ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ನೀಡಿದೆ. ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರಿನ ಕೆಲವು ಹೋಟೆಲ್ಗಳು ಕಳೆದ ವರ್ಷ ವಿಧಾನಸಭೆ ಚುನಾವಣೆ ವೇಳೆಯೂ ಇದೇ ರೀತಿಯ ಪ್ರಯತ್ನ ಮಾಡಿದ್ದವು.
ಹೋಟೆಲ್ಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಧ್ಯಂತರ ಆದೇಶ ನೀಡಿದ್ದಾರೆ.