ಕನ್ನಡ ಕಲಿಕೆ ಕಡ್ಡಾಯಕ್ಕೆ ಹೈಕೋರ್ಟ್ ಮಧ್ಯಂತರ ಬ್ರೇಕ್ !

Prasthutha|

ಬೆಂಗಳೂರು :ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯ ಮಾಡದಂತೆ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ. ರಾಜ್ಯದ ಪದವಿ ಶಿಕ್ಷಣದಲ್ಲಿ ಕನ್ನಡ ಕಡ್ಡಾಯ ಕಲಿಕೆ ಮಾಡಿರುವ ಸರ್ಕಾರದ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ ಟ್ರಸ್ಟ್‌, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ ಹಾಗೂ ಕೆಲವು ವಿದ್ಯಾರ್ಥಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿತು.

- Advertisement -

ಕನ್ನಡ ಭಾಷೆ ವಿಷಯ ಕಲಿಕೆ ಕಡ್ಡಾಯಗೊಳಿಸ ಬಹುದೇ ಎಂದು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆಧರಿಸಿ ನ್ಯಾಯಾಲಯ ತೀರ್ಪು ನೀಡಬೇಕಿದೆ. ಸದ್ಯ ಕನ್ನಡ ಕಲಿಕೆ ಕಡ್ಡಾಯ ವಿಚಾರದಲ್ಲಿ ನಿಲುವು ತಿಳಿಸುವ ಪರಿಸ್ಥಿತಿಯಲ್ಲಿ ತಾನಿಲ್ಲ. ನಿಲುವು ತಿಳಿಸಲು ಕಾಲಾವಕಾಶ ನೀಡುವಂತೆ ಕೇಂದ್ರ ಸರ್ಕಾರ ಕೋರಿದೆ. ಆದ್ದರಿಂದ ಈ ಹಂತದಲ್ಲಿ ರಾಜ್ಯ ಸರ್ಕಾರವು ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಬಾರದು. ತಮ್ಮ ಇಚ್ಛೆಯಂತೆ ಕನ್ನಡ ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಅಧ್ಯಯನ ಮುಂದುವರಿಸಬಹುದು. ಇನ್ನು ಕನ್ನಡವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳನ್ನು ಕನ್ನಡ ಅಧ್ಯಯನ ಮಾಡುವಂತೆ ನ್ಯಾಯಾಲಯದ ಮುಂದಿನ ಆದೇಶದವರೆಗೆ ಒತ್ತಾಯ ಮಾಡಬಾರದು ಎಂದು ಸರ್ಕಾರಕ್ಕೆ ಆದೇಶ ನೀಡಿದೆ.

Join Whatsapp