Home ರಾಜ್ಯ ಕರ್ನಾಟಕದ ಎಲ್ಲ ಶಾಲೆಗಳ 5,8,9 ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್

ಕರ್ನಾಟಕದ ಎಲ್ಲ ಶಾಲೆಗಳ 5,8,9 ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.


ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿತ್ತು. ಈ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಏಕಸದಸ್ಯ ಪೀಠ ಪ್ರಸ್ತುತ ತೀರ್ಪು ನೀಡಿದೆ.

Join Whatsapp
Exit mobile version