Home ಟಾಪ್ ಸುದ್ದಿಗಳು ಅಝಾನ್ ಗೆ ಧ್ವನಿವರ್ಧಕ ಬಳಸಿದರೆ ಶಬ್ಧಮಾಲಿನ್ಯವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ: ಬಜರಂಗದಳ ಮುಖಂಡನ ಅರ್ಜಿ ತಳ್ಳಿಹಾಕಿದ...

ಅಝಾನ್ ಗೆ ಧ್ವನಿವರ್ಧಕ ಬಳಸಿದರೆ ಶಬ್ಧಮಾಲಿನ್ಯವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ: ಬಜರಂಗದಳ ಮುಖಂಡನ ಅರ್ಜಿ ತಳ್ಳಿಹಾಕಿದ ಹೈಕೋರ್ಟ್

ನವದೆಹಲಿ: ಅಝಾನ್ ಗೆ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವಂತೆ ಕೋರಿ ಬಜರಂಗದಳದ ನಾಯಕ ಶಕ್ತಿಸಿಂಹ ಝಾಲಾ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದ್ದು, ಮನವಿಯನ್ನು ಸಂಪೂರ್ಣವಾಗಿ ತಪ್ಪು ಕಲ್ಪನೆ ಎಂದು ಹೇಳಿದೆ.


ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಅನಿರುದ್ಧಮಯೀ ಅವರ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಈ ರೀತಿಯ ಪಿಐಎಲ್ (PIL) ಸಲ್ಲಿಕೆ, ಧ್ವನಿವರ್ಧಕಗಳ ಮೂಲಕ ಕೂಗುವುದರಿಂದ ಉಂಟಾಗುವ ಶಬ್ದದ ಪ್ರಮಾಣ ಎಷ್ಟು? ಇದರಿಂದ ಶಬ್ದ ಮಾಲಿನ್ಯ ಹೇಗೆ ಸಾಧ್ಯ ಎಂದು ಪ್ರಶ್ನಿಸಿತು.


ಅಝಾನ್ನ್ನು ದಿನದಲ್ಲಿ ಹೆಚ್ಚೆಂದರೆ 10ನಿಮಿಷಗಳಂತೆ 5 ಬಾರಿ ಕೂಗಲಾಗುತ್ತದೆ. ಬೆಳಿಗ್ಗೆ ಧ್ವನಿವರ್ಧಕದ ಮೂಲಕ ಅಝಾನ್ ನೀಡುವ ಮಾನವ ಧ್ವನಿಯು ಶಬ್ದ ಮಾಲಿನ್ಯವನ್ನು ಹೇಗೆ ಉಂಟು ಮಾಡುತ್ತದೆ ಎಂದು ನಾವು ತಿಳಿಯಲು ವಿಫಲರಾಗಿದ್ದೇವೆ ಎಂದು ಕೋರ್ಟ್ ಹೇಳಿದೆ.


ಮುಂಜಾನೆ 3 ಗಂಟೆಗೆ ದೇವಸ್ಥಾನದಲ್ಲಿ, ಡ್ರಮ್ಸ್ ಮತ್ತು ಸಂಗೀತದೊಂದಿಗೆ ಬೆಳಿಗ್ಗೆ ಆರತಿ ಕೂಡ ಪ್ರಾರಂಭವಾಗುತ್ತದೆ. ಹಾಗಾದರೆ ಇದು ಯಾರಿಗೂ ಯಾವುದೇ ರೀತಿಯ ಶಬ್ದವನ್ನು ಉಂಟುಮಾಡುವುದಿಲ್ಲವೇ? ಗಂಟೆಯ ಶಬ್ಧ ದೇವಾಲಯದ ಹೊರಗೆ ಕೇಳಿಸುವುದಿಲ್ಲವೇ ಎಂದು ಕೋರ್ಟ್ ಪ್ರಶ್ನಿಸಿದೆ.

Join Whatsapp
Exit mobile version