ಎಸ್ ಐಟಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್: ರೇವಣ್ಣಗೆ ಬಿಗ್ ರಿಲೀಫ್

Prasthutha|

ಬೆಂಗಳೂರು: ಮೈಸೂರು ಜಿಲ್ಲೆ ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ನೀಡಿರುವ ಜಾಮೀನು ರದ್ದು ಕೋರಿ SIT ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

- Advertisement -


ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಎಸ್ ಐಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಆದರೆ ಹೈಕೋರ್ಟ್ ಇಂದು (ಆಗಸ್ಟ್ 28) ಎಸ್ಐಟಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಎಚ್ ಡಿ ರೇವಣ್ಣಗೆ ಮತ್ತಷ್ಟು ಬಿಗ್ ರಿಲೀಫ್ ಸಿಕ್ಕಂತಾಗಿದೆ.



Join Whatsapp