ಸಿಎಂಗೆ 2 ದಿನ ರಿಲೀಫ್: ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್

Prasthutha|

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಆದೇಶದ ಕುರಿತ ವಿಚಾರಣೆಯನ್ನು ಮತ್ತೆ ಕರ್ನಾಟಕ ಹೈಕೋರ್ಟ್ ಮುಂದೂಡಿದೆ.

- Advertisement -

ಈ ಬಗ್ಗೆ ಹೈಕೋರ್ಟ್ ನಲ್ಲಿ ಗುರುವಾರ ನಾಗಪ್ರಸನ್ನ ಅವರ ಏಕಪೀಠ ವಿಚಾರಣೆ ನಡೆಸಿತು. ವಾದ ಆಲಿಸಿದ ಪೀಠವು ವಿಚಾರಣೆನ್ನು ಆಗಸ್ಟ್ 31 ಕ್ಕೆ ಮುಂದೂಡಿದೆ. ಈ ಮೂಲಕ ಇನ್ನೆರಡು ದಿನ ಸಿಎಂ ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಕ್ಕಿದೆ.

ಸಿಎಂ ಪರವಾಗಿ ವಾದ ಆರಂಭಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದ ಆರೋಪಗಳಿಗೆ ಯಾವುದೇ ಶೋಕಾಸ್‌ ನೋಟಿಸ್‌ ನೀಡದೆ ನೇರವಾಗಿ ಪ್ರಾಸಿಕ್ಯೂಶನ್‌ ಗೆ ಅನುಮತಿ ನೀಡಿದೆ. ಜತೆಗೆ ರಾಜ್ಯಪಾಲರು ಸಚಿವ ಸಂಪುಟ ಸಭೆಯ ಸಲಹೆಯನ್ನು ಪಡೆಯದೇ ತರಾತುರಿಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ಕೊಟ್ಟಿದ್ದಾರೆ. ಹೀಗಾಗಿ, ರಾಜ್ಯಪಾಲರ ಅನುಮತಿಯನ್ನು ರದ್ದು ಪಡಿಸಬೇಕು ಎಂದು ವಾದ ಮಂಡಿಸಿದರು.



Join Whatsapp
Exit mobile version