ಬೆಂಗಳೂರು: ಐದು ಮತ್ತು ಎಂಟನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.
ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ದ್ವಿ ಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.
ಮಾರ್ಚ್ 13ರಿಂದ ಆರಂಭವಾಗಬೇಕಿದ್ದ 5, 8 ತರಗತಿಗಳ ಪಬ್ಲಿಕ್ ಪರೀಕ್ಷೆಗಳನ್ನು ಕರ್ನಾಟಕ ಹೈಕೋರ್ಟ್ ನ ಆದೇಶದಂತೆ ಮುಂದೂಡಲಾಗಿತ್ತು. ಇದೀಗ ನ್ಯಾಯಾಲಯದ ಆದೇಶದ ಹಿನ್ನೆಲೆ ಯಲ್ಲಿ ಮತ್ತೆ ಪರೀಕ್ಷೆ ನಡೆಸಲು ಸರ್ಕಾರ ಸಿದ್ದತೆ ನಡೆಸಿದೆ. ಎಲ್ಲವೂ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ಅಶೋಕ್ ಎಸ್. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠ ಆದೇಶದಲ್ಲಿ ತಿಳಿಸಿದೆ.