5,8,9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಮುಂದುವರಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್

Prasthutha|

ಬೆಂಗಳೂರು: ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ನ ದ್ವಿಸದ್ಯ ಪೀಠ ರದ್ದುಗೊಳಿಸಿದ್ದು 5,8,9, ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪು ರದ್ದುಪಡಿಸಿದ ವಿಭಾಗೀಯ ಪೀಠ, ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಬಹುದು. ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಿದೆ.



Join Whatsapp