Home ಟಾಪ್ ಸುದ್ದಿಗಳು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ಹೈಕೋರ್ಟ್ ರಿಲೀಫ್

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ಹೈಕೋರ್ಟ್ ರಿಲೀಫ್

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್​​ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ.

ಸಿಟಿ ರವಿ ವಿರುದ್ಧ ಫೆಬ್ರವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.

ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್​ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು.

ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.

ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್​​​ಪಿಪಿ ವಾದ ಮಂಡಿಸಿದರು. ಆದಾಗ್ಯೂ ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿತು.

Join Whatsapp
Exit mobile version