ಸಚಿವ ಡಿ.ಸುಧಾಕರ್’ಗೆ ರಿಲೀಫ್: FIRಗೆ ಹೈಕೋರ್ಟ್ ಮಧ್ಯಂತರ ತಡೆ

Prasthutha|

ಬೆಂಗಳೂರು: ಸಚಿವ ಡಿ.ಸುಧಾಕರ್ ವಿರುದ್ಧ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆಯ ವಿವಿಧ ಸೆಕ್ಷನ್ ಗಳಡಿಯಲ್ಲಿ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ.

- Advertisement -


ತಮ್ಮ ವಿರುದ್ಧದ ಎಫ್ ಐಆರ್ ರದ್ದು ಕೋರಿ ಸೆವನ್ ಹಿಲ್ಸ್ ಡೆವಲ್ಪರ್ಸ್ ಆ್ಯಂಡ್ ಟ್ರೇಡರ್ಸ್ ನ ನಿರ್ದೇಶಕರೂ ಆಗಿರುವ ಡಿ.ಸುದಾಕರ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಆದೇಶ ನೀಡಿತು. ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ತುರ್ತು ನೊಟೀಸ್ ಜಾರಿ ಮಾಡಿ ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿತು.