ಬೆಂಗಳೂರು : ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ ಗೊಳಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದು, ಕ್ಷಮಾದಾನದ ಅರ್ಜಿಯನ್ನು ಇಂದು ತಿರಸ್ಕರಿಸಿದೆ.
ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿ ಅರವಿಂದ್ ಕುಮಾರ್, ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿದ್ದು, ಕ್ಷಮಾಧಾನ ಅರ್ಜಿಯನ್ನು ರಾಷ್ಟ್ರಪತಿಗಳು ವಿಳಂಬ ಮಾಡಿಲ್ಲ ಎಂಬುದಾಗಿ ಅಭಿಪ್ರಾಯಪಟ್ಟು, ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ.
ಚಿತ್ರದುರ್ಗ ಮೂಲದ ಉಮೇಶ್ ರೆಡ್ಡಿ ಬೆಂಗಳೂರು ಸೇರಿದಂತೆ ಹಲವೆಡೆ ಸುಮಾರು 20 ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆಗೈದು ‘ವಿಕೃತ ಕಾಮಿ’ ಎಂಬ ಕುಖ್ಯಾತಿಗೆ ಪಾತ್ರನಾಗಿದ್ದ.