ರಾಜ್ಯದಲ್ಲಿ ಜನಾದೇಶ ಇಲ್ಲದ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ: ಎಚ್.ಸಿ.ಮಹದೇವಪ್ಪ

Prasthutha|

ವಿಜಯಪುರ: ಕರ್ನಾಟಕದಲ್ಲಿ ಜನಮನ್ನಣೆ ಇಲ್ಲದೇ ಶಾಸಕರನ್ನು ಖರೀದಿಸುವ ಮೂಲಕ ಜನಾದೇಶ ಇಲ್ಲದ ಸರ್ಕಾರ ಅಧಿಕಾರ ನಡೆಸುತ್ತಿದೆ. ಎರಡು ವರ್ಷಗಳ ಹಿಂದೆ ಬಾಂಬೆ‌ ಶಾಸಕರಿಂದ ರಚನೆಯಾದ ಯಡಿಯೂರಪ್ಪ ನೇತೃತ್ವದಲ್ಲಿ ನೈತಿಕತೆ ಇಲ್ಲದ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ‌ ಅಧಿಕಾರ ನಡೆಸಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಎಚ್.ಸಿ. ಮಹದೇವಪ್ಪ ವಾಗ್ದಾಳಿ ನಡೆಸಿದೆ.

- Advertisement -

ಸೋಮವಾರ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಬಿಜೆಪಿ ಸರ್ಕಾರವನ್ನು ಟೀಕಿಸಿದ ಅವರು, ರಾಜ್ಯದಲ್ಲಿ ಸಂವಿಧಾನ ವಿರೋಧಿ ಸರ್ಕಾರ ರಚಿಸಿದ್ದರಿಂದ ಜನಪರ ಕಾರ್ಯಕ್ರಮ ನೀಡಲು ಸಾಧ್ಯವಾಗುತ್ತಿಲ್ಲ. ಜನಾದೇಶವೇ ಇಲ್ಲದ ಬಿಜೆಪಿ ಹಣಬಲ, ಜಾತಿಬಲ, ತೋಳ್ಬಲದಂಥ ಅಸ್ತ್ರಗಳನ್ನು ಬಳಸಿಕೊಂಡು ಸರ್ಕಾರ ಹಾಗೂ ಮುಖ್ಯಮಂತ್ರಿ ಹುದ್ದೆಯ ಘನತೆಯನ್ನೇ ಕಳೆದಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಳೆದ ವರ್ಷದ ಪ್ರವಾಹ ಸಂತ್ರಸ್ತರಿಗೆ ಈವರೆಗೆ ಪರಿಹಾರ ನೀಡಿಲ್ಲ. ಬಜೆಟ್‌ನಲ್ಲಿ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಬಳಸದೇ ವಂಚಿಸಿದ್ದೇ ಈ ಸರ್ಕಾರದ ಸಾಧನೆ ಎಂದು ಆರೋಪಿಸಿದರು.

- Advertisement -

ದೇಶದಲ್ಲಿ ಜನರ ಪ್ರತಿಕ್ರಿಯೆಗೂ ಅವಕಾಶ ನೀಡದೇ ಅವೈಜ್ಞಾನಿಕ ರೀತಿಯಲ್ಲಿ ಶಿಕ್ಷಣ ನೂತನ ನೀತಿ ಅನುಷ್ಠಾನಕ್ಕೆ ಮುಂದಾಗಿದೆ. ಇದರಿಂದಾಗಿ ಭವಿಷ್ಯದ ಭಾರತದ ಶೈಕ್ಷಣಿಕ ವ್ಯವಸ್ಥೆಗೆ ಬರೆ ಎಳೆಯುವ ಹಾಗೂ ಉಳ್ಳವರು ಮಾತ್ರ ಶಿಕ್ಷಣ ಪಡೆಯುವ ದುಸ್ಥಿತಿ ಎದುರಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

Join Whatsapp