ಅಶ್ಲೀಲ ದೃಶ್ಯ ಹಂಚಿಕೆ ಆರೋಪ: ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

Prasthutha|

ಬೆಂಗಳೂರು: ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

- Advertisement -


ಆ ಮೂಲಕ ಅವರಿಗೆ ಬಂಧನದಿಂದ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆ ಮುಂದುವರಿಸಲು ಎಸ್ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋಗಳನ್ನ ಚಿತ್ರೀಕರಿಸಿದರೆ ಅದನ್ನ ಶೇರ್ ಮಾಡಿದ್ದಾರೆ ಎಂದು ಪ್ರೀತಂ ವಿರುದ್ಧ ಮಹಿಳೆ ಆರೋಪಿಸಿದ್ದರು. ಹೀಗಾಗಿ, ಪ್ರೀತಂಗೌಡ ವಿರುದ್ಧ ಕಠಿಣ ಸೆಕ್ಷನ್ ಗಳನ್ನ ಎಫ್ ಐಆರ್ ನಲ್ಲಿ ಸೇರ್ಪಡೆ ಮಾಡಲಾಗಿತ್ತು.

Join Whatsapp
Exit mobile version