‘ಗುಜರಿ’ ಬಸ್ ಸಂಚಾರಕ್ಕೆ ಬಳಸದಂತೆ ಹೈಕೋರ್ಟ್ ಆದೇಶ

Prasthutha|

ಬೆಂಗಳೂರು: ನಿಗದಿತ ಕಿಲೋ ಮೀಟರ್ ಗಳಷ್ಟು ಸಂಚರಿಸಿದ ಬಳಿಕ ಸಾಮರ್ಥ್ಯ ಕಳೆದುಕೊಂಡ ಕೆಎಸ್ ಆರ್ ಸಿ ಬಸ್ ಗಳನ್ನು ಗುಜರಿಗೆ ಹಾಕಬೇಕು. ಗುಜರಿಗೆ ಹಾಕಿದ ಬಸ್ಗಳನ್ನು ಪುನಃ ನಗರ, ಹಳ್ಳಿಗಳ ಮಾರ್ಗ ಅಥವಾ ಮತ್ತಾವುದೇ ಮಾರ್ಗಗಳಲ್ಲಿನ ಸಂಚಾರಕ್ಕೆ ಬಳಸಲು ಅನುಮತಿ ನೀಡಬಾರದು ಎಂದು ಹೈಕೋರ್ಟ್, ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

- Advertisement -

ಆಯಸ್ಸು ತೀರಿ ಗುಜರಿ ಸೇರಬೇಕಾಗಿದ್ದ ಕೆಎಸ್ಆರ್ಟಿ ಬಸ್ ಅನ್ನು ರಸ್ತೆಗಿಳಿಸಿ ಅಪಘಾತ ಉಂಟು ಮಾಡಿ ಇಬ್ಬರು ವಿದ್ಯಾರ್ಥಿಗಳ ಸಾವಿಗೆ ಕಾರಣವಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಮಹತ್ವದ ತೀರ್ಪು ಪ್ರಕಟಿಸಿದೆ. ‘ಬಸ್ಗಳು ಸಂಚಾರಕ್ಕೆ ಅರ್ಹವಾಗಿರುವ ಬಗ್ಗೆ ಪ್ರತಿ ವರ್ಷವೂ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ (ಆರ್ಟಿಓ) ಸುಸ್ಥಿತಿ ದೃಢೀಕರಣ ಪತ್ರ (ಎಫ್ಸಿ) ಪಡೆಯಬೇಕು. ಆರ್ಟಿಓ ವತಿಯಿಂದ ದೃಢೀಕರಣ ಪತ್ರ ಪಡೆದ ಬಸ್ಗಳಿಗೆ ಮಾತ್ರವೇ ರಸ್ತೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕು ಎಂದು ಹೇಳಿದೆ.



Join Whatsapp