ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ತರಾಟೆ

Prasthutha|

ಬೆಂಗಳೂರು : ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಗಳ ಅಕ್ರಮ ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ರಮಕ್ಕೆ ಮೇ.31 ರಂದು(ಇಂದು) ಹೈಕೊರ್ಟ್ ತೀವ್ರ ತರಾಟೆ ತೆಗೆದು ಕೊಂಡಿದೆ.

- Advertisement -


ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂಧಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್ಐ ಆರ್ ಪ್ರಶ್ನಿಸಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಇಂದು ನಡೆಸಿದ ನ್ಯಾಯಮೂರ್ತಿ ಕೃಷ್ಣ ಧೀಕ್ಷಿತ್ ಅವರಿದ್ದ ನ್ಯಾಯಪೀಠ, ಶಾಸಕರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.


ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆದರೆ, ಜನ ಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ ?, ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸದಲ್ಲಿ ಮಾಡುವುದಕ್ಕೆ ಮುಂದಾಗುವದು ಎಷ್ಟು ಸರಿ ಎಂದು ಪ್ರಶ್ನಿಸಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಕಾಡುವುದಕ್ಕೆ ಬಿಡಿ ಎಂದು ಪೀಠ ಸಲಹೆ ನೀಡಿತು.



Join Whatsapp