ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನಡೆಸುತ್ತಿರುವ ತನಿಖೆಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.
‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ’ಗಳ ವಿಚಾರಣೆ ನಡೆಸುವ ಹೈಕೋರ್ಟ್ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಶುಕ್ರವಾರ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಫೆಬ್ರವರಿ 24ರವರೆಗೆ ತನಿಖೆಗೆ ತಡೆ ನೀಡಿದರು.
ವಿಚಾರಣೆ ವೇಳೆ ಶಿವಕುಮಾರ್ ಪರ ಹಿರಿಯ ವಕೀಲ ಸಿ.ಎಚ್.ಜಾಧವ್, “ಅರ್ಜಿದಾರರು ಸಾರ್ವಜನಿಕ ಸೇವಕರಿದ್ದು ಅವರ ಕುಟುಂಬದ ಸದಸ್ಯರನ್ನೂ ಈ ಪ್ರಕರಣದಲ್ಲಿ ಸಿಲುಕಿಸಿ ಕಿರುಕುಳ ನೀಡಲಾಗುತ್ತಿದೆ” ಎಂದು ದೂರಿದರು.