ಶರಣ್ ಪಂಪ್ ವೆಲ್ ವಿರುದ್ಧ FIRಗೆ ಹೈಕೋರ್ಟ್ ತಡೆ

Prasthutha|

ಮಂಗಳೂರು: ಮಂಗಳಾದೇವಿ ಜಾತ್ರೆಯಲ್ಲಿ ಭಗವಾಧ್ವಜ ಕಟ್ಟಿರುವ ಹಿಂದೂಗಳ ಮಳಿಗೆಗಳಲ್ಲಿ ಮಾತ್ರವೇ ಹಿಂದೂ ಗ್ರಾಹಕರು ವ್ಯಾಪಾರ ಮಾಡಬೇಕು ಎಂದು ಪ್ರಕಟಣೆ ಹೊರಡಿಸಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಮಂಗಳೂರು ನಗರ ದಕ್ಷಿಣ ಠಾಣಾ ಪೊಲೀಸರು ದಾಖಲಿಸಿರುವ ಎಫ್ ಐಆರ್ ಗೆ ಕರ್ನಾಟಕ ಹೈಕೋರ್ಟ್ ನ ರಜಾಕಾಲೀನ ಪೀಠವು ಮಧ್ಯಂತರ ತಡೆ ನೀಡಿದೆ.

- Advertisement -


ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಶರಣ್ ಪಂಪ್ವೆಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು. ಕೆಲ ಕಾಲ ಪ್ರಕರಣವನ್ನು ಆಲಿಸಿದ ಪೀಠವು ಮಂಗಳೂರು ದಕ್ಷಿಣ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.


ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ ಅರುಣ್ ಶ್ಯಾಮ್ ಅವರು, ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಪ್ರಕಟಣೆ ಹೊರಡಿಸಲಾಗಿದೆ ಎಂಬ ದೂರಿನಲ್ಲಿ ಹುರುಳಿಲ್ಲ. ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲು ಮಾಡಿಕೊಂಡಿರುವ ಪ್ರಕರಣ ರಾಜಕೀಯ ಪ್ರೇರಿತವಾಗಿದೆ ಮತ್ತು ದುರುದ್ದೇಶದಿಂದ ಕೂಡಿದೆ. ಆದ್ದರಿಂದ, ಎಫ್ ಐಆರ್ ರದ್ದುಗೊಳಿಸಬೇಕು ಎಂದು ಕೋರಿದರು.

- Advertisement -

ಕೃಪೆ-ಬಾರ್&ಬೆಂಚ್



Join Whatsapp