ಉಪೇಂದ್ರಗೆ ರಿಲೀಫ್: ನಟನ ವಿರುದ್ಧದ FIR​ ಗೆ ಹೈಕೋರ್ಟ್ ತಡೆ

Prasthutha|

ಬೆಂಗಳೂರು: ಜಾತಿ ನಿಂದನೆ ಪದ ಬಳಸಿದ ಆರೋಪವನ್ನು ಎದುರಿಸುತ್ತಿದ್ದ ನಟ ಉಪೇಂದ್ರ ಅವರ ವಿರುದ್ಧ ದಾಖಲಾಗಿದ್ದ ಎಫ್​ ಐಆರ್​ ಗೆ ತಡೆ ನೀಡಿ ಹೈಕೋರ್ಟ್​ ಆದೇಶಿಸಿದೆ.

- Advertisement -

ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಮ್ಮ ವಿರುದ್ಧ ಹಾಕಲಾಗಿದ್ದ ಎಫ್​ ಐಆರ್​ ಗೆ ತಡೆ ನೀಡಬೇಕು ಎಂದು ಕೋರಿ ಉಪೇಂದ್ರ ಅವರು ಹೈಕೋರ್ಟ್​ ಮೆಟ್ಟಿಲು ಏರಿದ್ದರು. ಈಗ ಅವರ ಪರವಾಗಿ ಕೋರ್ಟ್​ ಆದೇಶ ನೀಡಿದೆ. ‘ಗಾದೆ ಮಾತು ಉಲ್ಲೇಖಿಸಿ ಉಪೇಂದ್ರ ಹೇಳಿಕೆ ನೀಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಇದಕ್ಕೆ ಅನ್ವಯವಾಗುವುದಿಲ್ಲ’ ಎಂದು ಉಪೇಂದ್ರ ಪರವಾಗಿ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡನೆ ಮಾಡಿದ್ದಾರೆ.

Join Whatsapp