ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ: ಅಜೀತ್ ಭಾರ್ತಿ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

Prasthutha|

ಬೆಂಗಳೂರು: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರ ಬಗ್ಗೆ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಪತ್ರಕರ್ತ ಅಜೀತ್ ಭಾರ್ತಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

- Advertisement -


ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸಬೇಕೆಂದು ಕೋರಿ ಯೂಟ್ಯೂಬರ್, ಪತ್ರಕರ್ತ ಅಜಿತ್ ಭಾರ್ತಿ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.


ಸರ್ಕಾರಿ ಅಭಿಯೋಜಕರು ತಮ್ಮ ಆಕ್ಷೇಪಣೆ ಸಲ್ಲಿಸಲಿ. ಅಲ್ಲಿಯವರೆಗೂ ಅರ್ಜಿದಾರರ ವಿರುದ್ಧ ಯಾವುದೇ ಹೆಚ್ಚಿನ ತನಿಖೆಗೆ ಅನುಮತಿಸಲಾಗುವುದಿಲ್ಲ ಎಂದು ಹೇಳಿ ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿತು.

Join Whatsapp