ಬೆಂಗಳೂರು: ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಅವರ ವಿರುದ್ಧವಾಗಿ ದಾಖಲಾಗಿರುವ ಈ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.
ಉಭಯ ನಾಯಕರು ಸೆಷನ್ಸ್ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳವುದನ್ನು ನಿರ್ಬಂಧಿಸುವವಂತೆ ಕೋರಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶರು ಎಚ್. ಡಿ ದೇವೇಗೌಡ ಮತ್ತು ಎಚ್. ಡಿ ಕುಮಾರಸ್ವಾಮಿ ಹೆಸರು ಬಳಸಂತೆ ಮಾಧ್ಯಮಗಳ ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.