ಕುಮಾರಸ್ವಾಮಿಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆ

Prasthutha|

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಚುನಾವಣಾ ಪ್ರಚಾರ ವೇಳೆ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಮಹಿಳಾ ಆಯೋಗ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದೆ.

- Advertisement -

ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಾದ ಮಂಡಿಸಿದ ಹೈಕೋರ್ಟ್ ವಕೀಲ ಎ.ವಿ.ನಿಶಾಂತ್, “ಆರೋಪಕ್ಕೆ ಸಂಬಂಧಿಸಿದಂತೆ ಆಯೋಗವು ಕುಮಾರಸ್ವಾಮಿ ಅವರಿಗೆ ನೋಟಿಸ್ ನೀಡಿ ಖುದ್ದು ಹಾಜರಾಗಲು ಸೂಚಿಸಿದೆ. ಆದರೆ, ಈ ನೋಟಿಸ್ ಪೂರ್ವಗ್ರಹ ಪೀಡಿತ ಭಾವನೆಯಿಂದ ಕೂಡಿದ್ದು ಸ್ವಾಭಾವಿಕ ನ್ಯಾಯತತ್ವಗಳಿಗೆ ವಿರುದ್ಧವಾಗಿದ್ದು, ಇದನ್ನು ರದ್ದುಗೊಳಿಸಬೇಕು” ಎಂದು ಕೋರಿದರು.


ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ನೋಟಿಸ್ ಗೆ ತಡೆ ನೀಡಿ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿತು.
“ಮಹಿಳಾ ಆಯೋಗದ ಅಧ್ಯಕ್ಷರು ಜಾರಿ ಮಾಡಿರುವ ನೋಟಿಸ್ ಗೆ ಅರ್ಜಿ ಇತ್ಯರ್ಥವಾಗುವರೆಗೂ ತಡೆ ವಿಧಿಸಲಾಗಿದೆ” ಎಂದು ಆದೇಶಿಸಿ ವಿಚಾರಣೆ ಮುಂದೂಡಿತು.



Join Whatsapp