ಸಂಸದ ಸ್ಥಾನದಿಂದ ಪುತ್ರ ಪ್ರಜ್ವಲ್ ರೇವಣ್ಣ ಅನರ್ಹತೆ ಬೆನ್ನಲ್ಲೇ ಶಾಸಕ ರೇವಣ್ಣಗೆ ಹೈಕೋರ್ಟ್ ಸಮನ್ಸ್

Prasthutha|

ಬೆಂಗಳೂರು: ಸಂಸದ ಸ್ಥಾನದಿಂದ ಪುತ್ರ ಪ್ರಜ್ವಲ್ ರೇವಣ್ಣ ಅನರ್ಹತೆ ಬೆನ್ನಲ್ಲೇ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

- Advertisement -


ಶಾಸಕ ಅಸಿಂಧು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿದೆ. ವಿಧಾನಸಭಾ ಕಾರ್ಯದರ್ಶಿ ಮೂಲಕ ಸಮನ್ಸ್ ನೀಡಿದೆ.


ಹೈಕೋರ್ಟ್ ಏಕಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಚುನಾವಣಾ ಅಕ್ರಮ ವಿಚಾರವಾಗಿ ವಕೀಲ ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದರು. ರೇವಣ್ಣ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ದೇವರಾಜೇಗೌಡ ಪರಾಜಿತಗೊಂಡಿದ್ದರು. ರೇವಣ್ಣ ಸೇರಿದಂತೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರಿಗೂ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.



Join Whatsapp